ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ: ಜೆಡಿಎಸ್ ಮತ್ತು ಬಿಜೆಪಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ…. ಮೈಸೂರು,ಫೆಬ್ರವರಿ,24,2021(..):ಮೈಸೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಈ ಮಧ್ಯೆ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಮೇಯರ್ ಸ್ಥಾನಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ 36 ನೇ ವಾರ್ಡ್‌ನ ಪಾಲಿಕೆ ಸದಸ್ಯೆ ರುಕ್ಮಿಣಿ ಮಾದೇಗೌಡ. ಉಪಮೇಯರ್ ಸ್ಥಾನಕ್ಕೆ ಸಮೀವುಲ್ಲಾ ನಾಮಪತ್ರ ಸಲ್ಲಿಸಿದ್ದಾರೆ. ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ 59ನೇ ವಾರ್ಡ್‌ನ ಪಾಲಿಕೆ ಸದಸ್ಯೆ ಸುನಂದಾ ಪಾಲನೇತ್ರ, ಉಪ ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಸಾತ್ವಿಕ್ ಸಂದೇಶ್ ನಾಮಪತ್ರ ಸಲ್ಲಿಸಿದ್ದಾರೆ. : - - – - .