ಸಿದ್ದರಾಮಯ್ಯ ಮುಂದಿನ ಸಿಎಂ; ಜಮೀರ್ ಅಹ್ಮದ್ ಹೇಳಿಕೆಗೆ ಧ್ರುವನಾರಾಯಣ್ ಆಕ್ಷೇಪ ಮೈಸೂರು,ಫೆಬ್ರವರಿ,23,2021(..) :ಸಿಎಂ ಆಯ್ಕೆ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ಹಿಂದಿನಿಂದಲೂ ಶಾಸಕರ ಅಭಿಪ್ರಾಯ ಪಡೆದು ಸಿಎಂ ಆಯ್ಕೆ ಮಾಡುವ ಸಂಪ್ರದಾಯವಿದೆ. ಯಾರೂ ಈಗಲೇ ಇಂತಹ ಹೇಳಿಕೆ ಕೊಡಬಾರದು. ಈ ರೀತಿಯ ಹೇಳಿಕೆಗಳಿಂದ ಪಕ್ಷ ಸಂಘಟನೆಗೆ ಧಕ್ಕೆಯಾಗುತ್ತೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಜಮೀರ್ ಅಹ್ಮದ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, 2013 ರಲ್ಲಿ ಖರ್ಗೆ ಹೆಸರು ಪ್ರಬಲವಾಗಿ ಕೇಳಿ ಬಂದರೂ ಸಿದ್ದರಾಮಯ್ಯರನ್ನ ಆಯ್ಕೆ ಮಾಡಿದೆ ಎಂದು ತಿಳಿಸಿದರು. : ----- -.