ಪಿಎಫ್ ಐ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಂಗಳೂರು,ಫೆಬ್ರವರಿ,19,2021(..):ಪಾಪುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿ ಪಾಪುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉಲ್ಲಾಳದಲ್ಲಿ ಪಿಎಫ್ ಐ ಮುಖಂಡರು ನೀಡಿರುವ ಹೇಳಿಕೆ ದೇಶ ವಿರೋಧಿ ಮತ್ತು ಅಸಂವಿಧಾನಿಕ. ದೇಶದ ಜನತೆಯನ್ನು ಒಡೆಯುವ ಪ್ರಯತ್ನದ ಹೇಳಿಕೆ ಅದಾಗಿದೆ. ಆರ್ ಎಸ್ ಎಸ್ ಸಂಘಟನೆ ಒಂದು ದೇಶಭಕ್ತಿಯ ಪ್ರತೀಕ ಎಂದರು. ರಾಮ ಮಂದಿರ ನಿರ್ಮಿಸುವಂತೆ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆ ಬಗ್ಗೆ ಪಿಎಫ್ ಐ ನಾಯಕರು ಮಾತನಾಡಿರುವುದು ಆಕ್ಷೇಪಾರ್ಹ. ಪಿಎಫ್ ಐ ತನ್ನ ನಿಜವಾದ ಬಣ್ಣವನ್ನು ಹಲವು ಬಾರಿ ತೋರಿಸಿದೆ. ದೇಶ ವಿರೋಧಿ ಹೇಳಿಕೆ ನೀಡಿರುವ ಪಿಎಫ್ ಐ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ ಎಂದ ಬಸವರಾಜ ಬೊಮ್ಮಾಯಿ ತಿಳಿಸಿದರು. : - – –-