“ಬೀದಿ ನಾಯಿಗಳ ದಾಳಿಗೆ ಜಿಂಕೆ ಸಾವು” ಮೈಸೂರು,ಫೆಬ್ರವರಿ,19,2021(..) :ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಜಿಂಕೆ ಸಾವನ್ನಪ್ಪಿದೆ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಗ್ರಾಮದಲ್ಲಿ ಗೋವಿಂದೇಗೌಡ ಎಂಬುವವರ ಮನೆ ಬಳಿ ಈ ಘಟ‌ನೆ ನಡೆದಿದೆ. ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ‌ಯನ್ನು ಕಂಡ ಬೀದಿ ನಾಯಿಗಳು ದಾಳಿ ನಡೆಸಿವೆ. ಈ ಸಂದರ್ಭ ಗ್ರಾಮಸ್ಥರು ನಾಯಿಗಳನ್ನು ಓಡಿಸಿ, ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಜಿಂಕೆ ಮೃತಪಟ್ಟಿದ್ದು, ಜಿಂಕೆಯ ಮೃತದೇಹವನ್ನು ಅರಣ್ಯ ಸಿಬ್ಬಂದಿ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. : ----