ಆತ್ಮಹತ್ಯೆ ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಮಂಡ್ಯ,ಫೆಬ್ರವರಿ,18,2021(..) :ಆತ್ಮಹತ್ಯೆ ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ. ಎಷ್ಟೇ ಸಮಸ್ಯೆ ಇದ್ದರು ಎದುರಿಸಬೇಕು. ಯಾರು ಕೂಡ ಆತ್ಮಹತ್ಯೆ ಮಾಡಿಕೊಳ್ಳವಂತ ದೃಢ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದಲ್ಲಿ ಅಭಿಮಾನಿಯ ಅಂತಿಮ ದರ್ಶನ ಪಡೆದು ಮಾತನಾಡಿದ ಅವರು, ನನಗೆ ಗೊತ್ತಿಲ್ಲದೆ ದೊಡ್ಡ ಅಭಿಮಾನಿಯಾಗಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾನೆ. ಅಭಿಮಾನಿ ಆಗಲಿ, ಯಾರೇ ಆಗಲಿ ಅಂತ್ಯಕ್ರಿಯೆಗೆ ಬರಬೇಕು ಅಂತಾ ಬರೆದುಕೊಂಡಿದ್ದಾನೆ. ಅಂತ್ಯಕ್ರಿಯೆಗೆ ಬಂದಿದ್ದೇನೆ ಎಂದಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯತ್ವ ಮುಖ್ಯ ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಎಂದು ಬರೆದಿದ್ದಾನೆ. ನನಗೆ ಅಷ್ಟೊಂದು ಪರಿಚಯವಿಲ್ಲ. ಅದರೂ, ನನ್ನ ಅಭಿಮಾನಿಯಾಗಿದ್ದಾನೆ. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯತ್ವ ಮುಖ್ಯ. ಸಾಮಾನ್ಯ ಕುಟುಂಬದಿಂದ ಬಂದ ವ್ಯಕ್ತಿ. ಅವರ ಮನೆಯವರಿಗೆ ಬಹಳ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಸಂತಾಪ ಸೂಚಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಬಹಳ ದೀರ್ಘಕಾಲ ಬಾಳಿ ಬದುಕಬೇಕಾದ ವ್ಯಕ್ತಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. : - --- -