ಮೀಸಲಾತಿ ಬಗ್ಗೆ ಸಂವಿಧಾನದ ಚೌಕಟ್ಟಿನಲ್ಲಿ ಚರ್ಚಿಸಿ ನಿರ್ಧಾರ-ಸಿಎಂ ಬಿಎಸ್ ಯಡಿಯೂರಪ್ಪ…. ಬೆಂಗಳೂರು,ಫೆಬ್ರವರಿ,18,2021(..):ಮೀಸಲಾತಿ ಬಗ್ಗೆ ಸಂವಿಧಾನದ ಚೌಕಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ವಿವಿಧ ಸಮುದಾಯಗಳು ಮೀಸಲಾತಿಗೆ ಆಗ್ರಹಿಸುತ್ತಿರುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ ಯಡಿಯೂರಪ್ಪ, ಸಚಿವ ಸಂಪುಟಸಭೆಯಲ್ಲಿ ಮೀಸಲಾತಿ ಬಗ್ಗೆ ಚರ್ಚೆ ಮಾಡುತ್ತೇವೆ. ಮೀಸಲಾತಿ ಎಲ್ಲಾ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇನೆ. ಸಂವಿಧಾನದ ಚೌಕಟ್ಟಿನಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ವಾಲ್ಮೀಕಿ ಸಮುದಾಯದ ನಾಯಕರನ್ನ ನಾನೇ ಕರೆಸಿದ್ದೆ. ಸಮುದಾಯದ ನಾಯಕರ ಜತೆ ಚರ್ಚಿಸಿದ್ದೇನೆ. ಎಲ್ಲಾ ಸಮುದಾಯದವರಿಗೂ ನ್ಯಾಯ ಒದಗಿಸುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು. …. : , . 18, 2021 (..): .. . . “ .” “ . ,” .: .. / / / : – – --- .