ಮಾರ್ಚ್ 27ರಂದು ರಾಜ್ಯಾದ್ಯಂತ ‘ಮೆಗಾ ಲೋಕ್ ಅದಾಲತ್’’… ಮೈಸೂರು. ಜನವರಿ 17,2021(..):ಮೆಗಾ ಲೋಕ್ ಅದಾಲತ್” ಕಾರ್ಯಕ್ರಮವನ್ನು ಮಾರ್ಚ್ 27ರಂದು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ. ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು, ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಮತ್ತು ಖಾಯಂ ಜನತಾ ನ್ಯಾಯಾಲಯವನ್ನು ಆನ್ ಲೈನ್,ವೀಡಿಯೋ ಹಾಗೂ ಕಾನ್ಛರೆನ್ಸ್ ಈ-ಮೇಲ್, ಎಸ್.ಎಮ್.ಎಸ್., ವಾಟ್ಸ್ ಆಪ್, ಎಲೆಕ್ರ್ಟಾನಿಕ್ ಮೋಡ್ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್. ಸೆಂಟರ್, ಮಳಲವಾಡಿ, ಜಯನಗರ, 5ನೇ ಕ್ರಾಸ್, ಮೈಸೂರು-14 ದೂರವಾಣಿ ಸಂಖ್ಯೆ: 0821 2330130, : @. ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. : -‘ -‘ – 27-