ಪ್ರತಿಷ್ಟಿತ ಮೆಡಿಕಲ್ ಕಾಲೇಜು ಮಾಲೀಕರಿಗೆ ಐಟಿ ಶಾಕ್: ಬೆಂಗಳೂರು ,ಮಂಗಳೂರು ಸೇರಿ ಹಲವೆಡೆ ಐಟಿ ದಾಳಿ.. ಬೆಂಗಳೂರು,ಫೆಬ್ರವರಿ,17,2021(..): ಪ್ರತಿಷ್ಟಿತ ಮೆಡಿಕಲ್ ಕಾಲೇಜು ಮಾಲೀಕರಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬೆಂಗಳೂರು ,ಮಂಗಳೂರು ಸೇರಿ ಹಲವೆಡೆ ಮೆಡಿಕಲ್ ಕಾಲೇಜುಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನ ಎಜೆ ಶೆಟ್ಟಿ ಆಸ್ಪತ್ರೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕರ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ನಗರದ ಬೆಂದೂರು ವೆಲ್ ನಲ್ಲಿರುವ ಎ.ಜೆ.ಆಸ್ಪತ್ರೆಯ ಮಾಲೀಕ ಎ.ಜೆ.ಶೆಟ್ಟಿ ಅವರ ಮನೆ ಹಾಗೂ ಯೆನಪೋಯಾ ಆಸ್ಪತ್ರೆಯ ಮಾಲೀಕ ವೈ.ಅಬ್ದುಲ್ಲಾ ಅವರ ಮನೆ ಮೇಲೆ ದಾಳಿ ನಡೆದಿದೆ. ಬೆಂಗಳೂರಿನಲ್ಲಿ ದೇವನಹಳ್ಳಿ ಬಳಿ ಇರುವ ಆಕಾಶ್ ಮೆಡಿಕಲ್ ಕಾಲೇಜು, ಬೆಂಗಳೂರು ಹೊರವಲಯದ ಕುಂಬಳಗೋಡು ಸಮೀಪವಿರುವ ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿಯಾಗಿದೆ. ಬಿಜಿಎಸ್ ಶಿಕ್ಷಣ ಸಂಸ್ಥೆಗಳಲ್ಲಿ ಮೂರು ಕಾರಿನಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ಶಿರಾ ಗೇಟ್ ಬಳಿ ಇರುವ ಸಪ್ತಗಿರಿ ಮೆಡಿಕಲ್ ಕಾಲೇಜು ಮೇಲೆ ಐಟಿ ದಾಳಿಯಾಗಿದ್ದು, 7 ಐಟಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಇನ್ನು ದೇರಳಕಟ್ಟೆಯಲ್ಲಿರುವ ಕಣಚೂರು ಮೆಡಿಕಲ್ ಕಾಲೇಜು ಮೇಲೂ ಐಟಿ ದಾಳಿಯಾಗಿದೆ. ಕಣಚೂರು ಮೋನು ಮನೆಯಲ್ಲಿ ಐಟಿ ಅಧಿಕಾರಿಗಳು ದಾಖಲೆ ಪರಿಶಿಲನೆ ನಡೆಸುತ್ತಿದ್ದಾರೆ. … : , , . 17, 2021 (..): , . . . . .. , , . , , , . 10 ., , 7 . . ’ .: / / / : - – - - -.