ಅ.5ರವರೆಗೆ ಎಸ್ ಐಟಿ ಕಸ್ಟಡಿಗೆ ಶಾಸಕ ಮುನಿರತ್ನ ಬೆಂಗಳೂರು,ಸೆಪ್ಟಂಬರ್,24,2024 (..): ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್ 5ರವರೆಗೆ ಎಸ್ ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ ಆದೇಶಿಸಿದೆ. ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೆ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸ್​ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ಶಾಸಕ ಮುನಿರತ್ನರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಶಾಸಕ ಮುನಿರತ್ನ ಅವರನ್ನ ಅಕ್ಟೋಬರ್​ 5ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್​ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶಿಸಿದ್ದಾರೆ. : , , ,