2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಗೆಲುವು… ಚೆನ್ನೈ,ಫೆಬ್ರವರಿ,16,2021(..):ಪ್ರವಾಸಿ ಇಂಗ್ಲೇಂಡ್ ವಿರುದ್ದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋತು ಮುಖಭಂಗ ಅನುಭವಿಸಿದ್ದ ಟೀಂ ಇಂಡಿಯಾ ಇದೀಗ 2ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಜಯ ಗಳಿಸುವ ಮೂಲಕ ಸೇಡು ತೀರಿಸಿಕೊಂಡಿದೆ. ಇಲ್ಲಿನ ಎಂ. ಎ. ಚಿದಂಬರಂ ಮೈದಾನದಲ್ಲಿ ನಡೆದ ಇಂಡಿಯಾ- ಇಂಗ್ಲೆಂಡ್‌ ನಡುವಿನ 4 ಟೆಸ್ಟ್​ ಪಂದ್ಯಗಳ ಸರಣಿಯ 2ನೇ ಟೆಸ್ಟ್​ ಪಂದ್ಯದಲ್ಲಿ ಟೀಂ ಇಂಡಿಯಾ 317 ರನ್​ಗಳ ಭರ್ಜರಿ ಜಯ ಸಾಧಿಸಿದೆ. 2ನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ನೀಡಿದ್ದ 482 ರನ್​ಗಳ ಗುರಿ ಬೆನ್ನಟ್ಟಿದ ಇಂಗ್ಲೇಂಡ್ 164 ರನ್​ಗಳಿಗೆ ಆಲ್ ಔಟ್ ಆಗಿ ಸೋಲನುಭವಿಸಿತು. ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ​ ಇಂಡಿಯಾ 329 ರನ್​ ಗಳಿಗೆ ಆಲ್ ಔಟ್ ಆಯಿತು. ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಆರಂಭಿಕ ಆಟಗಾರ ರೋಹಿತ್​ ಶರ್ಮಾ (161 ರನ್​) ರಹಾನೆ (67 ರನ್​) ಹಾಗೂ ರಿಶಭ್​ ಪಂತ್​ (58 ರನ್​) ಅಬ್ಬರದ ಬ್ಯಾಟಿಂಗ್​ ನೆರವಿನಿಂದ 329 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿತ್ತು. ನಂತರ ಬ್ಯಾಟಿಂಗ್ ಆರಂಭಿಸಿದ ಇಂಗ್ಲೇಂಡ್ 134 ರನ್ ಗೆ ಸರ್ವಪತನ ಕಂಡಿತು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತದ ಪರ ಆರ್.ಅಶ್ವಿನ್ 5 ವಿಕೆಟ್ ಕಬಳಿಸಿ ಮಿಂಚಿದರು. ನಂತರ 2ನೇ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾ, ಇಂಗ್ಲೆಂಡ್ ​ಗೆ 482 ರನ್​ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 164 ರನ್​ಗಳಿಗೆ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು ಸರ್ವಪತನಗೊಂಡಿತು. ಈ ಮೂಲಕ ಟೀಂ ಇಂಡಿಯಾ 317 ರನ್ ಗಳ ಜಯ ಸಾಧಿಸಿದೆ. … 2nd , . 16, 2021 (..): . 4 , .. 317 . 482 164 .: / 2nd / : -2nd -