ಜನ ರೊಚ್ಚಿಗೆದ್ದು “ಕತ್ತಿ” ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು : ವಿಪಕ್ಷ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ಬೆಂಗಳೂರು,ಫೆಬ್ರವರಿ,16,2021(..): ಸಚಿವ ಉಮೇಶ್ ಕತ್ತಿಯವರೇ, ನಿಮ್ಮ ಅಧಿಕಪ್ರಸಂಗತನದ ವಿರುದ್ಧ ಜನ ರೊಚ್ಚಿಗೆದ್ದು ಕತ್ತಿ ಬೀಸಿದರೆ ಇದ್ದ ಕುರ್ಚಿಯೂ ಬಿಡಬೇಕಾದೀತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶವ್ಯಕ್ತಪಡಿಸಿದ್ದಾರೆ.ಸಚಿವ ಉಮೇಶ್ ಕತ್ತಿಯವರೇ, ಈಗ ಕಷ್ಟಪಟ್ಟು ಗಳಿಸಿರುವ ಮಂತ್ರಿಸ್ಥಾನದಲ್ಲಿ ಕೂತು ಜನತೆಗೆ‌ ಒಳ್ಳೆಯದನ್ನು ಮಾಡಿ. ನಿಮ್ಮದೇ ಒಂದು ರಾಜ್ಯ ಕಟ್ಟಿ ನೀವೇ ಮುಖ್ಯಮಂತ್ರಿಗಳಾದಾಗ ಇಂತಹ ತುಘಲಕ್ ದರ್ಬಾರ್ ನಡೆಸಿ ಎಂದು ಕಿಡಿಕಾರಿದ್ದಾರೆ. :-----------