ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ನಿಧನಕ್ಕೆ ಸಿಎಂ ಬಿ.ಎಸ್.ವೈ ಸಂತಾಪ ಬೆಂಗಳೂರು,ಫೆಬ್ರವರಿ,16,2021(..):ನಿವೃತ್ತ ನ್ಯಾಯಮೂರ್ತಿ ರಾಮಾ ಜೋಯಿಸ್ ನಿಧನಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯರು, ನಿವೃತ್ತ ನ್ಯಾಯಮೂರ್ತಿಗಳಾದ ರಾಮಾ ಜೋಯಿಸ್ ಅವರ ನಿಧನ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ರಾಜ್ಯಪಾಲರಾಗಿ, ರಾಜ್ಯಸಭಾ ಸಂಸದರಾಗಿ ಕೂಡ ಅವರು ಅನುಪಮ ಸೇವೆ ಸಲ್ಲಿಸಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತಾ, ದೇವರು ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. … . : , . 16, 2021 (..): .. . , , “ , . . .”: / . / : -- ’-- ...-