“ಮೀಸಲಾತಿ ಬೇಡಿಕೆ: ಯಾವ ಸ್ವಾಮೀಜಿಗೂ ಆತಂಕ, ಸಂಶಯ ಬೇಡ” – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರು,ಫೆಬ್ರವರಿ,14,2021(..) :ಮೀಸಲಾತಿ ಸಂಬಂಧಿಸಿದಂತೆ ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸಲಾಗುವುದು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಈ ವಿಚಾರವಾಗಿ ಯಾವ ಸ್ವಾಮೀಜಿಯವರಿಗೂ ಆತಂಕ, ಸಂಶಯ ಬೇಡ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸವ್ಯಕ್ತಪಡಿಸಿದ್ದಾರೆ.ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮೀಸಲಾತಿಗಾಗಿ ವಿವಿಧ ಸಮುದಾಯದ ಸ್ವಾಮಿಗಳು‌ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಯಾವ ರೀತಿ ಅದನ್ನು ಈಡೇರಿಸಬೇಕು ಎಂಬುದಷ್ಟೆ ಈಗ ಚರ್ಚೆ ಮಾಡಬೇಕಾಗಿದೆ ಎಂದಿದ್ದಾರೆ. ವೀರಶೈವ ಲಿಂಗಾಯತ, ವಾಲ್ಮೀಕಿ ಸೇರಿದಂತೆ ಹೋರಾಟ ನಿರತ ಎಲ್ಲಾ ಸಮಾಜದ ಸ್ವಾಮೀಜಿಗಳ ಬೇಡಿಕೆಯನ್ನು ಕಾನೂನು ಚೌಕಟ್ಟಿನಲ್ಲಿ ಈಡೇರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. : --- - - -..-