ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು….. ಮೈಸೂರು,ಫೆಬ್ರವರಿ,13,2021(..): ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ತಿ. ನರಸೀಪುರ ತಾಲ್ಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ದಿನೇಶ್ (23) ಮೃತಪಟ್ಟ ಬೈಕ್ ಸವಾರ. ದಿನೇಶ್ ನಂಜನಗೂಡು ತಾಲೂಕಿನ ಹದಿನಾರು ಗ್ರಾಮದ ನಿವಾಸಿಯಾಗಿದ್ದು, ಅಪಘಾತದ ತೀವ್ರತೆಗೆ ವ್ಯಕ್ತಿಯ ರುಂಡ ಛಿದ್ರವಾಗಿದೆ. ಘಟನಾ ಸ್ಥಳದಲ್ಲಿ ಸಂಬಂದಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - – - -