ಇಂದು ಮೈಸೂರಿಗೆ ಸಿಎಂ ಬಿಎಸ್ ಯಡಿಯೂರಪ್ಪ… ಮೈಸೂರು,ಫೆಬ್ರವರಿ,13,2021(..):ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೈಸೂರಿಗೆ ಆಗಮಿಸುತ್ತಿದ್ದಾರೆ. ಇಂದು ಸಂಜೆ 4 ಗಂಟೆ ವೇಳೆಗೆ ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರಿಗೆ ಆಗಮಿಸಲಿದ್ದು, ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ರಚಿಸಿರುವ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ. ಇನ್ನು ಇಂದು ಮೈಸೂರಿನಲ್ಲೆ ಸಿಎಂ ಬಿಎಸ್ ವೈ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ ಬೆಂಗಳೂರಿನತ್ತ ತೆರಳಲಿದ್ದಾರೆ. ಮೈಸೂರು ಭೇಟಿ ವೇಳೆ ಸಿಎಂ ಬಿಎಸ್ ವೈಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಸಾಥ್ ನೀಡಲಿದ್ದಾರೆ. : - – -