ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ನೋಟಿಸ್.. ನವದೆಹಲಿ,ಫೆಬ್ರವರಿ,12,2021(..): ಪದೇ ಪದೇ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಹೌದು, ಪಕ್ಷ ವಿರೋಧಿ ಹೇಳಿಕೆ ಹಾಗೂ ಸರ್ಕಾರಕ್ಕೆ ಮುಜುಗರ ತಂದ ಆರೋಪದಡಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಒಂದು ವಾರದೊಳಗೆ ನೋಟಿಸ್ ಗೆ ಉತ್ತರ ನೀಡುವಂತೆ ಶಾಸಕ ಯತ್ನಾಳ್ ಗೆ ಸೂಚನೆ ನೀಡಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷದ ವಿರುದ್ಧ ಹಾಗೂ ಸಿಎಂ ಯಡಿಯೂರಪ್ಪ ಅವರ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸಿದ್ದರು. ಇದರಿಂದಾಗಿ ಬಿಜೆಪಿ ಪಕ್ಷಕ್ಕೆ ಮುಜುಗರ ಕೂಡ ಉಂಟಾಗಿತ್ತು. ರಾಜ್ಯದ ನಾಯಕತ್ವದ ಬದಲಾವಣೆ ಬಗ್ಗೆಯೂ ಶಾಸಕ ಯತ್ನಾಳ್ ಹೇಳಿಕೆ ನೀಡುತ್ತಿದ್ದರು. ಹೀಗಾಗಿ ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಂಕಷ್ಟ ಎದುರಾಗಿದೆ. … , . 12, 2021 (..): , . . . - . .: / / - / : - – -