ಮೈಸೂರು ಪಾಲಿಕೆಯಲ್ಲಿ ಮೈತ್ರಿ ವಿಚಾರ: ಶಾಸಕ ಎಲ್. ನಾಗೇಂದ್ರ ಪ್ರತಿಕ್ರಿಯಿಸಿದ್ದು ಹೀಗೆ…. ಮೈಸೂರು,ಫೆಬ್ರವರಿ,12,2021(..):ಮೈಸೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಯಾಗುವ ವಿಶ್ವಾಸವಿದೆ. ಈ ಬಾರಿ ನಮ್ಮ ಅವಧಿಯಲ್ಲಿ ಮೊದಲ ಬಿಜೆಪಿ ಮೇಯರ್ ಮಾಡುವ ವಿಶ್ವಾಸವಿದೆ ಎಂದು ಬಿಜೆಪಿ ಶಾಸಕ ಎಲ್. ನಾಗೇಂದ್ರ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಎಲ್.ನಾಗೇಂದ್ರ, ಮೈತ್ರಿ ವಿಚಾರದಲ್ಲಿ ನಾವು ಹಿಂದೆ ಬಿದ್ದಿಲ್ಲ. ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆಯಾಗೋ ವಿಶ್ವಾಸವಿದೆ. ನಮ್ಮ ಪಕ್ಷದ ಮುಖಂಡರು ಮತ್ತು ಜಿಲ್ಲಾ ಉಸ್ತುವಾರಿಗಳು ಜೊತೆ ಚರ್ಚೆ ಮಾಡ್ತೇವೆ. ಈ ವಿಚಾರವಾಗಿ ಸದ್ಯ ಯಾವುದೇ ಮಾತುಕತೆ ಆಗಿಲ್ಲ ಎಂದರು. ಬಿಜೆಪಿಯಿಂದ ಈ ಬಾರಿ ಮೊದಲ ಮೇಯರ್ ಮಾಡೋ ಅವಕಾಶ ಇದೆ. ಈ ವಿಚಾರವಾಗಿ ನಾಳೆ ಸಿಎಂ ಜೊತೆ ಯಾವುದೇ ಮಾತುಕತೆ ಇಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಜಿಲ್ಲಾ ಮಂತ್ರಿಗಳಿಗೆ ನಿರ್ದೇಶನ ನೀಡಲಿದ್ದಾರೆ. ಅದರಂತೆ ಮುಂದಿನ ನಿರ್ಧಾರಗಳನ್ನ ಜಿಲ್ಲಾ ಮಂತ್ರಿಗಳು ಮಾಡಲಿದ್ದಾರೆ ಎಂದು ತಿಳಿಸಿದರು. : – - -.