ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ : ಸಚಿವ ಶ್ರೀರಾಮುಲು ಬೆಂಗಳೂರು,ಫೆಬ್ರವರಿ,12,2021(..): ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಕೊರೊನಾ ಹಾಗೂ ಪ್ರವಾಹ ಸಂಕಷ್ಟದ ಬಳಿಕ ಎಲ್ಲಾ ಸಚಿವರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಶ್ರೀರಾಮುಲು ಸರ್ಕಾರದ ಬಳಿ ಹಣವಿಲ್ಲದೇ ಅಭಿವೃದ್ಧಿ ಕೆಲಸಗಳು ಆಗುತ್ತಿವೆಯೇ ಎಂದು ಕಿಡಿಕಾರಿದ್ದಾರೆ. ಬಾದಾಮಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಅದಕ್ಕೆ ಹಣ ಎಲ್ಲಿಂದ ಬಂತು. ಸಿದ್ದರಾಮಯ್ಯ ಅವರಿಗೆ ಮಾತನಾಡುವುದಕ್ಕೆ ಬೇರೆ ವಿಷಯವಿಲ್ಲ. ಹೀಗಾಗಿ, ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಾರೆ ಎಂದು ಟೀಕಿಸಿದರು. ಕೊರೊನಾ ಹಾಗೂ ಪ್ರವಾಹದಿಂದಾಗಿ ಸರ್ಕಾರಕ್ಕೆ ತೊಂದರೆಯಾಗಿದೆ. ಹೀಗಾಗಿಯೂ, ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ ಎಂದು ತಿಳಿಸಿದ್ದಾರೆ. : ---- -