ಪ್ರೇಮಿಗಳ ದಿನಕ್ಕೆ ‘ರಾಧೆ ಶ್ಯಾಮ್’ ಟೀಸರ್ ರಿಲೀಸ್ ಬೆಂಗಳೂರು, ಫೆಬ್ರವರಿ 12, 2021 (..):ಫೆಬ್ರವರಿ 14 ಪ್ರೇಮಿಗಳ ದಿನದಂದು ‘ರಾಧೆ ಶ್ಯಾಮ್’ ಚಿತ್ರದ ಟೀಸರ್ ರಿಲೀಸ್ ಆಗುತ್ತಿದೆ. ಅಂದಹಾಗೆ ಎಲ್ಲರಿಗೂ ಗೊತ್ತಿರುವಂತೆ ‘ರಾಧೆ ಶ್ಯಾಮ್’ ರಾಧಾಕೃಷ್ಣ ಕುಮಾರ್ ನಿರ್ದೇಶನದ ಪ್ರಭಾಸ್ ನಟನೆಯ ಬಹುನಿರೀಕ್ಷೆಯ ಚಿತ್ರ. 6 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗುತ್ತಿದ್ದು, ಈ ಚಿತ್ರದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಪೂಜಾ ಹೆಗ್ಡೆ ಅಭಿನಯಿಸುತ್ತಿದ್ದಾರೆ. ಚಿತ್ರದ ಟೀಸರ್ ಗಾಗಿ ಪ್ರಭಾಸ್ ಅಭಿಮಾನಿಗಳು ಕಾಯುತ್ತಿದ್ದಾರೆ.