ಸೈನಿಕ ಸ್ಮಾರಕ ಭವನ ನಿರ್ಮಾಣ ಕಾರ್ಯದ ಜವಾಬ್ದಾರಿ ನಿರ್ಮಿತಿ ಕೇಂದ್ರಕ್ಕೆ : ಸಮಿತಿ ರಚಿಸುವಂತೆ ಡಿಸಿ ರೋಹಿಣಿ ಸಿಂಧೂರಿ ಸೂಚನೆ… ಮೈಸೂರು, ಫೆಬ್ರವರಿ.10,2021(..):ಮೈಸೂರು ನಗರದಲ್ಲಿ ಸೈನಿಕ ಸ್ಮಾರಕ ಭವನ ನಿರ್ಮಾಣ ಮಾಡುವ ಸಂಬಂಧ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸೈನಿಕ ಸ್ಮಾರಕ ಭವನದ ನಿರ್ಮಾಣಕ್ಕಾಗಿ ಮೊದಲ ಕಂತಿನಲ್ಲಿ 50 ಲಕ್ಷವನ್ನು ಬಿಡುಗಡೆ ಮಾಡಲಾಗಿದ್ದು, ಸೈನಿಕ ಸ್ಮಾರಕ ಭವನದ ನಿರ್ಮಾಣದ ಕಾರ್ಯವನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿತ್ತು. ಆದರೆ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನಿರ್ಮಾಣದ ಕೆಲಸವನ್ನು ವಿಳಂಬ ಮಾಡಿದ್ದರಿಂದ ಅನುದಾನವನ್ನು ವಾಪಸ್ಸು ಪಡೆದು, ನಿರ್ಮಾಣದ ಜವಾಬ್ದಾರಿಯನ್ನು ನಿರ್ಮಿತಿ ಕೇಂದ್ರದವರು ವಹಿಸಿಕೊಳ್ಳುವಂತೆ ಡಿಸಿ ರೋಹಿಣಿ ಸಿಂಧೂರಿ ಸೂಚಿಸಿದರು. ಸೈನಿಕರ ಸ್ಮಾರಕ ಭವನದ ನಿರ್ಮಾಣ ಕಾರ್ಯ ಕುರಿತಂತೆ ಪ್ರಗತಿಯನ್ನು ಗಮನಿಸಲು ಸಮಿತಿಯನ್ನು ರಚಿಸಿ, ನಿಗಧಿತ ವೇಳೆ ಕಟ್ಟಡ ಕಾಮಗಾರಿಯನ್ನು ಮುಕ್ತಾಯಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಡಿಸಿ ರೋಹಿಣಿ ಸಿಂಧೂರಿ ತಿಳಿಸಿದರು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚೆನ್ನಪ್ಪ, ನಿರ್ಮಿತಿ ಕೇಂದ್ರದ ಮಂಜುನಾಥ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರುದ್ರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. … : , . 11, 2021 (..): . , , “ . 50 . .” . . , , , .: / / : – - - --