ಎಸ್.ಟಿ ಮೀಸಲು ಹೋರಾಟ ಆರ್ ಎಸ್ ಎಸ್ ಪ್ರೇರಿತ: ಐ ಡೋಂಟ್ ಕೇರ್ ಈಶ್ವರಪ್ಪ ಎಂದ ಮಾಜಿ ಸಿಎಂ ಸಿದ್ಧರಾಮಯ್ಯ… ಹುಬ್ಬಳ್ಳಿ,ಫೆ,11,2021(..):ಕುರುಬ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ಹೋರಾಟದಲ್ಲಿ ರಾಜಕೀಯ ಮಾಡಲ್ಲ. ಆದರೆ ಆರ್ ಎಸ್ ಎಸ್ ನವರು ಕೆ.ಎಸ್ ಈಶ್ವರಪ್ಪ ಅವರನ್ನ ಎತ್ತಿಕಟ್ಟಿ ಹೋರಾಟ ಮಾಡಿಸುತ್ತಿದ್ದಾರೆ. ಎಸ್.ಟಿ ಮೀಸಲಾತಿ ಹೋರಾಟ ಆರ್.ಎಸ್ ಎಸ್ ಪ್ರೇರಿತ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಕುಲಶಾಸ್ತ್ರ ಅಧ್ಯಯನದ ವರದಿ ಬಂದಿಲ್ಲ. ವರದಿ ಬರುವ ಮುನ್ನವೇ ಹೋರಾಟ ಬೇಡ ಎಂದಿದ್ದೆ. ಆದರೆ ಈಗ ಹೋರಾಟ ಮಾಡುತ್ತಿರುವುದು ಆರ್. ಎಸ್ ಎಸ್ ಪ್ರೇರಿತ. ಈಶ್ವರಪ್ಪರನ್ನ ಆರ್.ಎಸ್ ಎಸ್ ಎತ್ತಿಕಟ್ಟುತ್ತಿದ್ದಾರೆ ಎಂದು ಟೀಕಿಸಿದರು. ಸಚಿವ ಈಶ್ವರಪ್ಪರ ಸರ್ಟಿಫಿಕೇಟ್ ಬೇಕಿಲ್ಲ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಕೆಲಸ ಮಾಡಿಲ್ಲ ಎಂದು ಹೇಳಿಕೆ ನೀಡಿದ್ದ ಸಚಿವ ಕೆ.ಎಸ್ ಈಶ್ವರಪ್ಪಗೆ ಟಾಂಗ್ ನೀಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ನಾನು ಏನು ಮಾಡಿದ್ದೇನೆ ಎಂಬುದು ಜನರಿಗೆ ಗೊತ್ತಿದೆ. ಹೀಗಾಗಿ ಸಚಿವ ಈಶ್ವರಪ್ಪ ಅವರ ಸರ್ಟಿಫಿಕೆಟ್ ಬೇಕಿಲ್ಲ. ಈಶ್ವರಪ್ಪ ಯಾರ್ರಿ?, ಈಶ್ವರಪ್ಪಗೆ ಲೆಕ್ಕ ಒಪ್ಪಿಸಬೇಕಾ? ಈ ಡೋಂಟ್ ಕೇರ್ ಈಶ್ವರಪ್ಪ ಎಂದು ಉತ್ತರಿಸಿದರು. … : ‘ ’ , ’, . 11, 2021 (..): “ ’ . . ,” . , “ . . . ,” .: / / : - - – -- - - - .