ವಿಧಾನಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ… ಬೆಂಗಳೂರು ,ಫೆಬ್ರವರಿ,9,2021(..):ವಿಧಾನಪರಿಷತ್ ಸಭಾಪತಿಯಾಗಿ ಜೆಡಿಎಸ್ –ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ್ ಹೊರಟ್ಟಿಯವರು ಅವಿರೋಧ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು. ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೇ ಕೊನೆಯ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಜೀರ್ ಅಹ್ಮದ್ ಕಣದಿಂದ ಹಿಂದೆ ಸರಿದ ಹಿನ್ನೆಲೆ . ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. : - - -