ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ‌: ಇಬ್ಬರು ಸ್ಥಳದಲ್ಲೇ ಸಾವು…. ಮೈಸೂರು,ಫೆಬ್ರವರಿ,8,2021(..):ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ‌ಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು-ಎಚ್.ಡಿ.ಕೋಟೆಯ ರಸ್ತೆಯಲ್ಲಿರುವ ಉದ್ಬೂರು ಗೇಟ್ ಬಳಿ ಈ ಘಟನೆ ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಲತ್ತೂರು ಗ್ರಾಮದ ಶಿವ(34), ಬೋಗಾದಿ ನಿವಾಸಿ ನಂದನ್(24) ಅಪಘಾತದಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರಿಬ್ಬರು ಕೆಲಸದ ನಿಮಿತ್ತ ಭಾನುವಾರ ಎಚ್.ಡಿ.ಕೋಟೆಗೆ ಹೋಗಿದ್ದರು. ಕೆಲಸ ಮುಗಿಸಿಕೊಂಡು ತಡರಾತ್ರಿ ವಾಪಸ್ ಮೈಸೂರಿಗೆ ಬರುವಾಗ ಜಯಪುರ ಹೋಬಳಿಯ ಉದ್ಬೂರು ಗೇಟ್ ಬಳಿ ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ರಭಸವಾಗಿ ಗುದ್ದಿದೆ. ಈ ವೇಳೆ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ‌. ಘಟನ ಸ್ಥಳಕ್ಕೆ ಜಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮೃತದೇಹವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ. ಈ‌ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : --- -