ರಸ್ತೆ ತಡೆ ಚಳುವಳಿ: ಜನರಿಗೆ ತೊಂದರೆಯಾಗದಂತೆ ಕ್ರಮ- ಗೃಹ ಸಚಿವ ಬಸವರಾಜ ಬೊಮ್ಮಾಯಿ…. ಬೆಂಗಳೂರು,ಫೆಬ್ರವರಿ,6,2021(..):ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ರೈತಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ತಡೆ ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಜನರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ರೈತರ ಪ್ರತಿಭಟನೆ ಕುರಿತು ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಾವು ರಾಜ್ಯದಲ್ಲಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಯಾರಿಗೂ ತೊಂದರೆ ಆಗೋದಿಲ್ಲ. ಒಂದು ವೇಳೆ ಸಾರ್ವಜನಿಕರಿಗೆ ತೊಂದರೆಯಾದ್ರೆ, ಖಂಡಿತ ಕ್ರಮ ಕೈಗೊಳ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ಹೆದ್ದಾರಿ ಚಳುವಳಿ ಮಾಢುತ್ತಿದ್ದಾರೆ. ರಾಜ್ಯದಲ್ಲಿ ಸುಗಮ ಸಂಚಾರಕ್ಕೆ ಯಾವುದೇ ಅಡ್ಡಿ ಇಲ್ಲ. ‘ನಾವು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದೇವೆ. ಯಾರಿಗೂ ತೊಂದರೆಯಾಗದಂತೆ ಕ್ರಮಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. : - - - - .