ಪಾಪ್ ಸಿಂಗರ್ ರಿಹಾನ ಭತ್ತದ ಗದ್ದೆ ನೋಡಿದ್ದಾರಾ..? : ಕೇಂದ್ರ ಸಚಿವ ಸದಾನಂದಗೌಡ ಕಿಡಿ ಮೈಸೂರು,ಫೆಬ್ರವರಿ,06,2021(..): ಪಾಪ್ ಸಿಂಗರ್ ರಿಹಾನ ಏನು ರೈತರ ಕಷ್ಟದ ಬಗ್ಗೆ ಮಾತನಾಡೋದು. ರಿಹಾನಗೆ ರೈತರ ಶ್ರಮದ ಬಗ್ಗೆ ಏನು ಗೊತ್ತಿದೆ. ರಿಹಾನಗೆ ಭತ್ತದ ಗದ್ದೆ ನೋಡಿದ್ದಾರಾ? ಎಂದು ಕೇಂದ್ರ ಸಚಿವ ಸದಾನಂದಗೌಡ ರಿಹಾನ ವಿರುದ್ಧ ಕಿಡಿಕಾರಿದರು.ಮೈಸೂರು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಹುಶಃ ರಿಹಾನ ಭತ್ತದ ಗದ್ದೆ ಮುಂದೆ ನಿಂತು ಫೋಟೋ ತೆಗೆಸಿಕೊಂಡು ಹೋಗಿರಬಹುದು. ರೈತರು ಹೇಗೆ ಮಾರಾಟ ಮಾಡ್ತಾರೆ ಅಂತ ರಿಹಾನೆಗೆ ಗೊತ್ತಾ ? ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರು ಯಾವತ್ತಾದರೂ ಭತ್ತದ ಗದ್ದೆ ನೋಡಿದ್ದಾರಾ ಹೇಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಳೆದ ಬೆಳೆಯನ್ನ ಮುಕ್ತವಾಗಿ ಮಾರಲು ರೈತರಿಗೆ ಸ್ವಾತಂತ್ರ್ಯ ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಆದರೆ, ರೈತನಿಗೆ ಇನ್ನು ಸ್ವಾತಂತ್ರ್ಯ ಸಿಕ್ಕಿಲ್ಲ. ರೈತರು ಈಗ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ. ರೈತನಿಗೆ ಬೆಳೆದ ಬೆಳೆಯನ್ನ ಮುಕ್ತವಾಗಿ ಮಾರಲು ಸ್ವಾತಂತ್ರ್ಯ ನೀಡುತ್ತಿದ್ದೇವೆ. ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುತ್ತಾರೆ ಎಂದರೆ ಕೊಡಲಿ ಬಿಡಿ. ಸುಮ್ಮನೆ ಯಾಕೇ ಹಠ ಮಾಡ್ತೀರಾ? ಎಂದು ಪ್ರಶ್ನಿಸಿದ್ದರು. ಬಂಡವಾಳ ಶಾಹಿಗಳ ಕೈಗೊಂಬೆಯಾಗುತ್ತಾರೆ ಎನ್ನುವುದು ಸುಳ್ಳು ರೈತರಿಗೆ ಬೆಂಬಲ ನೀಡಿದ್ದು, ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆಯಾಗಿ ಇರೋದು ಬೇಡ. ರೈತರು ಸ್ವತಂತ್ರವಾಗಿ ಬೆಳೆ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಬಂಡವಾಳ ಶಾಹಿಗಳ ಕೈಗೊಂಬೆಯಾಗುತ್ತಾರೆ ಎನ್ನುವುದು ಸುಳ್ಳು ಎಂದು ಹೇಳಿದರು. ಪಟ್ಟಭದ್ರ ಹಿತಾಸಕ್ತಿಯಿಂದ ಈ ಪ್ರತಿಭಟನೆಪಟ್ಟಭದ್ರ ಹಿತಾಸಕ್ತಿಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ. ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ರಾಜಿ ಆಗಿದ್ದೀವಿ. ಮಾತುಕತೆಗೂ ಸಿದ್ಧರಿದ್ದೀವಿ, ಆದರೆ, ರೈತರೆ ಹಠ ಮಾಡುತ್ತಿದ್ದಾರೆ ಎಂದು ತಿಳಿಸಿದರು. … ? .. , . 06, 2021 (..): “ ? ? ?” . , , “ . ? .”“ . . ,” .: .. / : ----- -