ಎರಡು ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರು ದುರ್ಮರಣ… ರಾಯಚೂರು,ಫೆಬ್ರವರಿ,5,2021(..): ಎರಡು ಲಾರಿಗಳು ಮತ್ತು ಒಂದು ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಗೋಲಪಲ್ಲಿ ಬಳಿ ಈ ಘಟನೆ ನಡೆದಿದೆ. ಎರಡು ಲಾರಿ ಮತ್ತು ಒಂದು ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇನ್ನು ಸ್ಥಳಕ್ಕೆ ಹಟ್ಟಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಲಾರಿ ಹಿಂಬದಿಯಲ್ಲಿ ಬರುತ್ತಿದ್ದ ಕಾರಿಗೆ ಅದರ ಹಿಂದೆ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ಇದ್ದ ನಾಲ್ವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. : - - – -