ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣ: ವಕೀಲೆ ವಿರುದ್ಧ ಕ್ರಮಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಆಗ್ರಹ… ಬೆಂಗಳೂರು,ಫೆಬ್ರವರಿ,5,2021(..):ಸಾಹಿತಿ ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಸಾಹಿತಿ ಪ್ರೊ. ಕೆ. ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಘಟನೆ ಖಂಡಿಸಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ಪ್ರಕರಣ ದಾಖಲಿಸಿ ವಕೀಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪ್ರೊ. ಕೆ. ಎಸ್. ಭಗವಾನ್ ರ ಮುಖಕ್ಕೆ ಮಸಿ ಬಳಿದ ದುಷ್ಕೃತ್ಯ ಖಂಡನೀಯ. ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಚರ್ಚೆ-ಸಂವಾದದ ಮೂಲಕ ಬಗೆಹರಿಸಿಕೊಳ್ಳಬೇಕೆ ವಿನಃ ಈ ರೀತಿಯ ಅಸಭ್ಯ ನಡವಳಿಕೆ ಮೂಲಕ ಅಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. : . . - - -- - - -