ಕೇಂದ್ರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ… ಮೈಸೂರು,ಫೆಬ್ರವರಿ,5,2021(..):ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಂಯುಕ್ತ ಹೋರಾಟ ಸಮಿತಿ ವತಿಯಿಂದ ಕರೆ ನೀಡಲಾಗಿದೆ. ನಾಳೆ ಮಧ್ಯಾಹ್ನ 12 ರಿಂದ 3 ಗಂಟೆವರೆಗೆ ದೇಶಾದ್ಯಂತ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ಸಂಯುಕ್ತ ಕಿಸಾನ್ ಮಂಚ್ ಕರೆ ಕೊಟ್ಟಿದ್ದು, ಸಂಯುಕ್ತ ಕಿಸಾನ್ ಮಂಚ್ ನ ಪ್ರತಿಭಟನೆಗೆ ರಾಜ್ಯ ರೈತ ಸಂಘ ಬೆಂಬಲ ನೀಡಿದೆ. ಹೀಗಾಗಿ ನಾಳೆ ರಾಜ್ಯದಲ್ಲೂ ರೈತಮುಖಂಡರು ರಾಷ್ಟ್ರೀಯ, ರಾಜ್ಯ ಹೆದ್ಧಾರಿ ತಡೆದು ಪ್ರತಿಭಟನೆ ನಡೆಸಲಿದ್ದಾರೆ. ಈ ನಡುವೆ ಮೈಸೂರು- ಬೆಂಗಳೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಸರ್ಕಲ್, ಮೈಸೂರು- ಊಟಿ ಬಂಡಿಪಾಳ್ಯ, ಬೆಂಗಳೂರು- ಹಾಸನ ಹೆದ್ದಾರಿಯ ಚನ್ನರಾಯಪಟ್ಟಣ, ಮಂಡ್ಯದ ವಿ.ಸಿ.ಫಾರಂ, ಚಿತ್ರದುರ್ಗ, ಗುಬ್ಬಿ, ರಾಯಚೂರು, ಕೋಲಾರ ಸೇರಿದಂತೆ ಹಲವು ಕಡೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾಹಿತಿ ನೀಡಿದ್ದಾರೆ. … ’ .’ , . 05, 2021 (..): . ’ . .’ 12.00 3.00 ’ . , - , - , - , .. , , , , , ., , ’ . : / 12.00 3.00 / : – –-- –-