ರೈತರ ಹೋರಾಟಕ್ಕೆ ಸಾಹಿತಿಗಳು, ಕಲಾವಿದರು, ನಟ,ನಟಿಯರು ಬೆಂಬಲಿಸುವಂತೆ ಮನವಿ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ… ಬೆಂಗಳೂರು,ಫೆಬ್ರವರಿ,4,2021(..):ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸಾಹಿತಿಗಳು, ಕಲಾವಿದರು, ನಟ,ನಟಿಯರು ಬೆಂಬಲಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ, ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನಿಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರಿಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ. ಈ ಸಂಬಂಧ ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು, ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು.‌ ನಾವೆಲ್ಲರೂ ರೈತರು ಬೆಳೆದ ಅನ್ನ ತಿನ್ನುವವರಲ್ಲವೇ..? ಎಂದು ಸಿದ್ಧರಾಮಯ್ಯ ರೈತರ ಹೋರಾಟಕ್ಕೆ ಬೆಂಬಲಿಸುವಂತೆ ಕರೆ ನೀಡಿದ್ದಾರೆ. : - – – – – - -