“ಮ್ಯಾನ್ ಹೋಲ್ ಗೆ ಕಾರ್ಮಿಕರನ್ನ ಇಳಿಸಿದರೆ, ಗಂಭೀರ ಕ್ರಮ” : ಹೈಕೋರ್ಟ್ ಎಚ್ಚರಿಕೆ ಬೆಂಗಳೂರು,ಜನವರಿ,03,2021(..): ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಿದರೆ, ಗಂಭೀರ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕಲಬುರ್ಗಿಯಲ್ಲಿ ಮ್ಯಾನ್ ಹೋಲ್ ಗೆ ಇಳಿದ ಮೂವರು ಕಾರ್ಮಿಕರ ಪೈಕಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದು, ಓರ್ವ ಕಾರ್ಮಿಕ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಮ್ಯಾನ್ ಹೋಲ್ ಗಳ ಸ್ವಚ್ಛತಾ ಕಾರ್ಯಕ್ಕೆ ಕಾರ್ಮಿಕರನ್ನು ಬಳಕೆ ಮಾಡುವುದಕ್ಕೆ ನಿಷೇಧವಿದೆ. ಹೀಗಾಗಿಯೂ, ಇಂತಹ ಘಟನೆ ಮರುಕಳಿಸುತ್ತಿರುವುದು ಆಘಾತಕಾರಿ ಎಂದು ಆತಂಕ ವ್ಯಕ್ತಪಡಿಸಿದೆ. “ರಾಜ್ಯ ಸರ್ಕಾರ ಹೈಕೋರ್ಟ್ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ”ರಾಜ್ಯ ಸರ್ಕಾರ ಹೈಕೋರ್ಟ್ ನಿರ್ದೇಶನಗಳನ್ನು ಪಾಲಿಸುತ್ತಿಲ್ಲ. ಆದೇಶ ಪಾಲಿಸದಿದ್ದರೇ ಗಂಭೀರ ಕ್ರಮ ಕೈಗೊಂಡು, ನ್ಯಾಯಾಂಗ ನಿಂದನೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿತು. : ----- -