ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಎಸಿಬಿ ದಾಳಿ…. ಬೆಂಗಳೂರು/ಕೋಲಾರ,ಫೆಬ್ರವರಿ,2,2021(..)ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ನೀಡಿದ್ದುಅಕ್ರಮ ಆಸ್ತಿಗಳಿಕೆ ಅರೋಪದ ಮೇಲೆ ರಾಜ್ಯದ ಹಲವು ಆಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಜ್ಯಾದ್ಯಂತ ಬೆಂಗಳೂರು ನಗರ, ಕೋಲಾರ, ಹುಬ್ಬಳ್ಳಿ ಸೇರಿ ರಾಜ್ಯದ ವಿವಿಧೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯ ಸಣ್ಣ ನೀರಾವರಿ ಇಲಾಖೆ ಇಇ ದೇವರಾಜ್ ಶಿಗ್ಗಾಂವಿ ಎಂಬವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ ಗೋಕುಲ ರಸ್ತೆ, ವಿದ್ಯಾನಗರ, ಕೋಟಿಲಿಂಗೆಶ್ವರ ನಗರದ ಮನೆಗಳಲ್ಲಿ ಮೂರು ಎಸಿಬಿ ತಂಡಗಳು ಪರಿಶೀಲನೆ ನಡೆಸುತ್ತಿವೆ. ಕೋಲಾರದಲ್ಲಿ ಡಿಹೆಚ್​ಓ ಡಾ. ವಿಜಯ್​ ಕುಮಾರ್ ಅವರ ಮನೆ ಕಚೇರಿ ಸೇರಿ ಒಟ್ಟು 6 ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. ಡಾ.ವಿಜಯ್ ಕುಮಾರ್ ಅವರ ಮನೆ, ಕಚೇರಿ, ಮುಳಬಾಗಿಲಿನಲ್ಲಿರುವ ಮನೆ ಹಾಗೂ ಅವರ ಖಾಸಗಿ ಆಸ್ಪತ್ರೆ ಮೇಲೆ ಎಸಿಬಿ ಅಧಿಕಾರಿಗಳು ರೇಡ್​ ಮಾಡಿದ್ದಾರೆ. ಜೊತೆಗೆ ಚಿಂತಾಮಣಿಯಲ್ಲಿರುವ ಮನೆ ಹಾಗೂ ಬೆಂಗಳೂರಿನ ಫ್ಲಾಟ್ ಮೇಲೆ ಏಕಕಾಲದಲ್ಲಿ ಎಸಿಬಿ ಡಿವೈಎಸ್​ಪಿ ಪುರುಷೋತ್ತಮ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಇನ್ನು ವಿಮ್ಸ್ ಮಾಜಿ ನಿರ್ದೇಶಕ ಶ್ರೀನಿವಾಸ್ ಮನೆ ಕಚೇರಿಗಳ ಮೇಲೂ ದಾಳಿ ನಡೆದಿದೆ ಎನ್ನಲಾಗಿದೆ. … / , . 2,2021 (..): - () . 30 , , , , . , . . ., . , . . .: / / / / : – - - –