ಈ ವಾರವೇ ಪರೀಕ್ಷಾ ಫಲಿತಾಂಶ ಪ್ರಕಟ ಸಾಧ್ಯತೆ. ಬೆಂಗಳೂರು,ಮೇ,6,2024 (..):ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಫಲಿತಾಂಶಕ್ಕೆ ಕಾದು ಕುಳಿತಿರುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು ಈ ವಾರವೇ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಾಳೆ ಲೋಕಸಭೆ ಚುನಾವಣೆ 2ನೇ ಹಂತದ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಫಲಿತಾಂಶ ವಿಳಂಬವಾಗಿದೆ. ಮೇ 9 ಅಥವಾ 10 ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಕೊಂಚ ತಡವಾಗಿ ಪ್ರಕಟವಾಗುತ್ತಿದೆ ಎನ್ನಲಾಗಿದೆ. ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಪ್ರಕಟಗೊಂಡ ನಂತರ ... ಹಾಗೂ . ವೆಬ್ ಸೈಟ್ ಗಳಲ್ಲಿ ನೋಡಬಹುದಾಗಿದೆ. : - - – -