ಇಂದು ಮಹಾತ್ಮ ಗಾಂಧೀಜಿ ಪುಣ್ಯತಿಥಿ ಹಿನ್ನೆಲೆ: ದೇಶಾದ್ಯಂತ ಮೌನಾಚರಣೆ ಮೂಲಕ ಗೌರವ ಸಲ್ಲಿಕೆ… ನವದೆಹಲಿ,ಜನವರಿ,30,2021(..):ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 73ನೇ ಪುಣ್ಯತಿಥಿ, ಹುತಾತ್ಮರ ದಿನಾಚಾರಣೆ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವರು ಮಹಾತ್ಮ ಗಾಂಧೀಜಿ ಅವರನ್ನ ಸ್ಮರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮೂಲಕ, ಮಹಾತ್ಮಾ ಗಾಂಧಿಯವರ ಶಾಂತಿ, ಅಹಿಂಸೆ, ಸರಳ, ಶುದ್ಧ, ಮಾನವೀಯತೆಯ ಜೀವನ ಮತ್ತು ಸಂದೇಶಗಳು ದಾರಿದೀಪ ಎಂದು ಸ್ಮರಿಸಿದ್ದಾರೆ. ಬಾಪು ಅವರ ಪುಣ್ಯತಿಥಿಯಂದು ಅವರಿಗೆ ಗೌರವ ನಮನಗಳು. ಅವರ ಮಾರ್ಗದರ್ಶನ, ತತ್ವಗಳು ಲಕ್ಷಾಂತರ ಮಂದಿಗೆ ಪ್ರೇರಣೆ. ಇಂದು ಹುತಾತ್ಮ ದಿನದಂದು ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಿಳೆಯರು ಮತ್ತು ಪುರುಷರನ್ನು ಇಂದು ನೆನೆಸಿಕೊಳ್ಳೋಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಹಾತ್ಮ ಗಾಂಧೀಜಿ 73ನೇ ಪುಣ್ಯತಿಥಿ ಹಿನ್ನೆಲೆ ದೇಶಾದ್ಯಂತ ಎರಡು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಮಹಾತ್ಮ ಗಾಂಧೀಜಿ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ. ರಾಷ್ಟ್ರಪತಿ ರಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ರಾಜಘಾಟ್ ಗೆ ಭೇಟಿ ನೀಡಿ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಿ ಗೌರವ ಸಲ್ಲಿಸಿದರು. .. 73rd : - , . 30, 2021 (..): 73rd . , , . , ’ -, -, , .“ . , . .” . - . , , , - , , , .: 73rd / / / / - : 73nd - - - – – --