ಸಿಂಘಗಡಿಯಲ್ಲಿ ಮತ್ತೆ ಉದ್ವಿಗ್ನ: ರೈತರ ಟೆಂಟ್ ಮೇಲೆ ಸ್ಥಳೀಯರಿಂದ ಕಲ್ಲು ತೂರಾಟ: ಪೊಲೀಸರಿಂದ ಲಾಠಿಚಾರ್ಜ್…. ನವದೆಹಲಿ,ಜನವರಿ,29,2021(..): ದೆಹಲಿಯ ಸಿಂಘುಗಡಿಯಲ್ಲಿ ಮತ್ತೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಲಿನ ಸ್ಥಳೀಯರು ಪ್ರತಿಭಟನಾ ನಿರತ ರೈತರ ಟೆಂಟ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪ್ರತಿಭಟನಾನಿರತ ರೈತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು ಈ ಮಧ್ಯೆ ಟೆಂಟ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ರೈತರು ಮತ್ತು ಸ್ಥಳೀಯರ ನಡುವೆ ಗಲಾಟೆ ನಡೆದಿದ್ದು ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ಮಾಡಿ ಅಶ್ರುವಾಯು ಸಿಡಿಸಿದ್ದಾರೆ. ಪೊಲೀಸರ ಮೇಲೂ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು ಹಲವು ಪೊಲೀಸರು ಗಾಯಗೊಂಡಿದ್ದಾರೆ. ರೈತರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ ಮಸ್ಥಳೀಯರು ಎಂದು ಹೇಳಿಕೊಂಡು ಕೆಲವರು ಸ್ಥಳದಲ್ಲಿ ಪ್ರತಿಭಟನೆ ನಡೆಸಿ, ಜಾಗ ಖಾಲಿ ಮಾಡುವಂತೆ ಒತ್ತಾಯಿಸಿ ಟೆಂಟ್ ಗಳನ್ನ ಕೆಡವಲು ಮುಂದಾದರು. … : , , . 29, 2021 (..): ’ . , , . - . . . . , , , .: / / / : - – – - -.