“ರಾಜ್ಯ ಸರ್ಕಾರದ ಏಕಪಕ್ಷೀಯ ನಡೆ ಖಂಡಿಸಿ, ಸಭೆಗಳಲ್ಲಿ ಭಾಗವಹಿಸದಿರಲು ನಿರ್ಧಾರ” : ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರು,ಜನವರಿ,29,2021(..): ಬಿಜೆಪಿಯವರ ಸರ್ವಾಧಿಕಾರಿ ಧೋರಣೆಯಿಂದಾಗಿ ಸದನದ ಕಾರ್ಯಕಲಾಪ ಸಲಹಾ ಸಮಿತಿಯು ತನ್ನೆಲ್ಲಾ ಪಾವಿತ್ರ್ಯತೆಯನ್ನು ಕಳೆದುಕೊಂಡು ನಾಮಕಾವಸ್ತೆಗೆ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. ರಾಜ್ಯ ಸರ್ಕಾರದ ಏಕಪಕ್ಷೀಯ ನಡೆಯನ್ನು ಖಂಡಿಸುವ ಸಲುವಾಗಿ ಈ ಸಮಿತಿಯ ಮುಂದಿನ ಸಭೆಗಳಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.ರಾಜ್ಯ ಸರ್ಕಾರವು ಸದನದ ಕಾರ್ಯಕಲಾಪಗಳ ಸಲಹಾ ಸಮಿತಿಯಲ್ಲಿ ತೀರ್ಮಾನ ಮಾಡಿದ ವಿಷಯಗಳನ್ನು, ವಿಧಾನಗಳನ್ನು ಸಂಪೂರ್ಣ ಉಲ್ಲಂಘಿಸಿ, ಏಕಪಕ್ಷೀಯವಾಗಿ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ. ಇದು ಸದನದ ಕಾರ್ಯಕಲಾಪ ಸಲಹಾ ಸಮಿತಿಗೆ ಮಾಡುತ್ತಿರುವ ಅವಮಾನವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ. : ----------