ಕಿಚ್ಚ ಸುದೀಪ್ @ ದುಬೈ ! ಬೆಂಗಳೂರು, ಜನವರಿ 28, 2021 (..): ಕಿಚ್ಚ ಸುದೀಪ್ ದುಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಸುದೀಪ್ ಅವರನ್ನು ದುಬೈ ಸಂಸ್ಕೃತಿಯಂತೆ ಬರಮಾಡಿಕೊಂಡಿದ್ದಾರೆ. ಚಿತ್ರರಂಗದಲ್ಲಿ ಕಿಚ್ಚ ಸುದೀಪ್ ಅವರ 25 ವರ್ಷ ಪೂರೈಸಿದ ಹಿನ್ನೆಲೆ ಪ್ರಪಂಚದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫ ಮೇಲೆ ಸುದೀಪ್ ಅವರ ಕಟೌಟ್ ಪ್ರದರ್ಶನವಾಗಲಿದೆ. ಸುದೀಪ್ ನಟಿಸುತ್ತಿರುವ ವಿಕ್ರಾಂತ್ ರೋಣ ಚಿತ್ರದ ಟೈಟಲ್ ಪೋಸ್ಟರ್ ಸಹ ಬುರ್ಜ್ ಖಲೀಫ ಮೇಲೆ ಅನಾವರಣವಾಗಲಿದೆ. ಜನವರಿ 31ರಂದು ಬೆಳಗ್ಗೆ ಈ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆ ಕಿಚ್ಚ ಸುದೀಪ್ ದುಬೈಗೆ ತೆರೆಳಿದ್ದಾರೆ.