ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲರ ಭಾಷಣ ವೇಳೆ ಭಿತ್ತಿಪತ್ರ ಹಿಡಿದು ಕಾಂಗ್ರೆಸ್ ಪ್ರತಿಭಟನೆ… ಬೆಂಗಳೂರು,ಜನವರಿ,28,2021(..):ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು ಫೆಬ್ರವರಿ 5ರವರೆಗೆ ನಡೆಯಲಿದೆ. ಈ ಮಧ್ಯೆ ಜಂಟಿ ಅಧಿವೇಶನ ಉದ್ಧೇಶಿಸಿ ರಾಜ್ಯಪಾಲ ವಜುಭಾಯಿ ವಾಲ ಅವರು ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ರಾಜ್ಯಪಾಲರ ಭಾಷಣ ವಿರೋಧಿಸಿ ಭಿತ್ತಿಪತ್ರ ಪ್ರದರ್ಶಿಸಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಅಧಿವೇಶನ ನಡೆಸಿಲ್ಲ ಎಂದು ಕಾಂಗ್ರೆಸ್ ಸದಸ್ಯರು ಭಿತ್ತಿಪತ್ರ ಪ್ರದರ್ಶಿಸಿ ತಮ್ಮ ಆಕ್ರೋಶ ಹೊರ ಹಾಕಿದರು . ಕಾಂಗ್ರೆಸ್ ವಿರೋಧದ ನಡುವೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ಧೇಶಿಸಿ ಭಾಷಣ ಮಾಡಿದರು. : - – ’ - –