ಕನ್ನಡಿಗರ ಕ್ಷಮೆಯಾಚಿಸಿದ ಸಾಹಿತಿ ದೊಡ್ಡರಂಗೇಗೌಡ… ಬೆಂಗಳೂರು,ಜನವರಿ,27,2021(..):ಹಿಂದಿ ಭಾಷೆಯ ತಿರಸ್ಕಾರವೇಕೆ..? ಹಿಂದಿ ನಮ್ಮ ರಾಷ್ಟ್ರಭಾಷೆ ಎಂದು ಹೇಳಿಕೆ ನೀಡಿದ್ಧಕ್ಕೆ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸಾಹಿತಿ ದೊಡ್ಡರಂಗೇಗೌಡರು ತಮ್ಮ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನೇನೂ ಯಾವುದೇ ಭಾಷೆಯನ್ನು ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತಿಲ್ಲ. ನಾನು ಭಕ್ತಿ ಪೂರ್ವಕವಾಗಿ ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ. ಕನ್ನಡಿಗರ ಮೇಲೆ ಹಿಂದಿ ಭಾಷೆಯ ಹಾಗೂ ಇಂಗ್ಲಿಷ್ ಹೇರಿಕೆಯ ರೀತಿ-ನೀತಿಯನ್ನು ನಾನು ಸಹಿಸುವುದಿಲ್ಲ. ನನ್ನ ಮಾತುಗಳು ಕನ್ನಡ ಜನರ ಮನಸ್ಸನ್ನು ನೋಯಿಸಿದ್ದರೇ, ನಾನು ಕ್ಷಮೆಯಾಚಿಸುತ್ತೇನೆ ಎಂದು ಸಾಹಿತಿ ದೊಡ್ಡರಂಗೇಗೌಡರು ಕನ್ನಡಿಗರ ಕ್ಷಮೆಯನ್ನು ಕೇಳಿದ್ದಾರೆ. : - –- - -