ರೈತರಿಗೆ ಪ್ರಚೋದನೆ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಷಡ್ಯಂತ್ರ-ಸಚಿವ ಶ್ರೀರಾಮುಲು ಆರೋಪ… ಚಿಕ್ಕೋಡಿ,ಜನವರಿ,27,2021(..):ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ನಿನ್ನೆ ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಸರಕಾರಕ್ಕೆ ಕೆಟ್ಟು ಹೆಸರು ತರಲು ಕಾಂಗ್ರೆಸ್ ರೈತರನ್ನು ಪ್ರಚೋದಿಸುತ್ತಿದೆ. ಸ್ವಾತಂತ್ರ್ಯ ಬಂದ ನಂತರ ಎಂದೂ ಈ ರೀತಿ ರೈತರು ಪ್ರತಿಭಟನೆ ಮಾಡಿಲ್ಲ. ಐದು ರಾಜ್ಯದ ಚುನಾವಣಾ ಹಿನ್ನೆಲೆ ಕಾಂಗ್ರೆಸ್ ಈ ರೀತಿ ರೈತರನ್ನು ಪ್ರಚೋದಿಸುತ್ತಿದೆ ಎಂದು ಸಚಿವ ಶ್ರೀರಾಮುಲು ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹಂಚನಾಳ ಗ್ರಾಮದಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು, ಚುನಾವಣಾ ಗೆಲ್ಲಲು ಕಾಂಗ್ರೆಸ್ ಪಕ್ಷ ರೈತರ ಬೆಂಬಲ ಪಡೆಯಲು ಈ ರೀತಿ ಪ್ರಚೋದನೆ ನೀಡಿ ಚುನಾವಣೆ ಗೆಲ್ಲಲು ಷಡ್ಯಂತ್ರ ಮಾಡುತ್ತಿದೆ. ದೇಶದಲ್ಲಿ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿದೆ. ಕಾಂಗ್ರೆಸ್ ನಾಯಕರು ನಿರುದ್ಯೋಗಿಗಳಾಗಿದ್ದಾರೆ, ಹತಾಶೆಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಹಾಗೆಯೇ ನಿನ್ನೆಯ ದೆಹಲಿ ರೈತರ ಗಲಾಟೆ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ರೈತರ ಜೊತೆ ಹನ್ನೊಂದು ಬಾರಿ ಕೇಂದ್ರ ಸರ್ಕಾರ ಸಭೆ ನಡೆಸಿದೆ. ರೈತರು ಸಮಾಧಾನವಾಗಿದ್ದರು. ಆದರೆ ಕಾಂಗ್ರೆಸ್ ಗೆ ನಿರುದ್ಯೋಗ ಕಾಡುತ್ತಿದೆ ಎಂದು ಸಚಿವ ಶ್ರೀರಾಮುಲು ಲೇವಡಿ ಮಾಡಿದರು. … . ., . 27,2021 (..): ’ . , . ’ . , . , , “ , -. .”: / / / : - – – – --.