ಮೈಸೂರು ಚಾಮುಂಡಿಬೆಟ್ಟಕ್ಕೆ ಭಕ್ತಸಾಗರ: ಮಾಸ್ಕ್, ಸಾಮಾಜಿಕ ಅಂತರ ಮಾಯ… ಮೈಸೂರು,ಜನವರಿ,26,2021(..): ಇಂದು ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ, ಸರ್ಕಾರಿ ರಜೆ ಇದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತರ ದಂಡೇ ಆಗಮಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಇಂದು ರಜೆ ಇದ್ದ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟ ಭಕ್ತರಿಂದ ತುಂಬಿ ತುಳುಕುತ್ತಿದ್ದು, ತಾಯಿ ಚಾಮುಂಡೇಶ್ವರಿ ದೇವರ ದರ್ಶನಕ್ಕೆ ಭಕ್ತಗಣ ಮುಗಿಬಿದ್ದ ದೃಶ್ಯ ಕಂಡು ಬಂತು. ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು ದೇವಸ್ಥಾನದ ಮೂರು ದ್ವಾರಗಳು ಫುಲ್ ರಶ್ ಆಗಿತ್ತು. ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ಜನರು ಸಾಲುಗಟ್ಟಿ ನಿಂತಿದ್ದು ಈ ವೇಳೆ ದೇವರ ದರ್ಶನದ ಗುಂಗಲ್ಲಿ ಭಕ್ತಗಣ ಸಾಮಾಜಿಕ ಅಂತರ ಮರೆತು ನಿಂತಿದ್ದ ದೃಶ್ಯ ಕಂಡು ಬಂದಿತ್ತು. ಜತೆಗೆ ಶೇಕಡಾ 90ರಷ್ಟು ಮಂದಿ ಮಾಸ್ಕ್ ಧರಿಸದೇ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದರು. : – - - -