ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ನಿಸ್ವಾರ್ಥ ಹೋರಾಟ, ದೇಶಪ್ರೇಮ ಆದರ್ಶಪ್ರಾಯವಾದದ್ದು – ಸಿಎಂ ಬಿ.ಎಸ್.ಯಡಿಯೂರಪ್ಪ ಬೆಂಗಳೂರು,ಜನವರಿ,26,2021(..): ಕನ್ನಡನಾಡಿನ ಹೆಮ್ಮೆಯ ಪುತ್ರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯತಿಥಿಯಂದು ಅವರಿಗೆ ಶತ ಶತ ಪ್ರಣಾಮಗಳು. ಅವರ ನಿಸ್ವಾರ್ಥ ಹೋರಾಟ, ದೇಶಪ್ರೇಮ ಆದರ್ಶಪ್ರಾಯವಾದದ್ದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.ಅಪ್ರತಿಮ ರಾಷ್ಟ್ರಪ್ರೇಮಿ, ದಿಟ್ಟ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆ ಅಂಗವಾಗಿ ಇಂದು ಬೆಂಗಳೂರು ನಗರದಲ್ಲಿರುವ ಸಂಗೊಳ್ಳಿ ರಾಯಣ್ಣ ಅವರ ಪುತ್ಥಲಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ರಾಯಣ್ಣನವರ ಆದರ್ಶಗಳು ಸಮಾಜಕ್ಕೆ ನಿರಂತರ ಪ್ರೇರಣೆ ನೀಡುತ್ತವೆ. ರಾಯಣ್ಣನವರ ನಿಷ್ಠೆ, ಧೈರ್ಯ, ಪರಾಕ್ರಮ, ತ್ಯಾಗ ಬಲಿದಾನಗಳನ್ನು ನಾಡು ಎಂದಿಗೂ ಮರೆಯುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. : - -- - ..