ಚಾಮುಂಡಿ ಬೆಟ್ಟದ ಬಳಿ ಟೆಂಪೋ ಚಾಲಕನ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ… ಮೈಸೂರು,ಜನವರಿ,26,2021(..):ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಟೆಂಪೋ ಚಾಲಕನ ಮೇಲೆ ಸಿನಿಮೀಯ ಸ್ಟೈಲ್ ನಲ್ಲಿ ಎರಡು ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮರಳು ಲಾರಿ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ಚಾಲಕನ ಮೇಲೆ ಸಿನಿಮೀಯ ಸ್ಟೈಲ್ ನಲ್ಲಿ 2 ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. : – – - –- .