72ನೇ ಗಣರಾಜ್ಯೋತ್ಸವ: ರಾಷ್ಟ್ರಪತಿ ರಮನಾಥ್ ಕೋವಿಂದ್ ರಿಂದ ಧ್ವಜಾರೋಹಣ: ಭಾರತದ ಸೇನಾಶಕ್ತಿ ಅನಾವರಣ… ನವದೆಹಲಿ,ಜನವರಿ,26,2021(..):ದೇಶಾದ್ಯಂತ 72ನೇ ಗಣರಾಜ್ಯೋತ್ಸವ ಸಂಭ್ರಮ ಕಳೆಗಟ್ಟಿದ್ದು, ಈ ಮಧ್ಯೆ ದೆಹಲಿಯ ರಾಜಪಥ್ ನಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್‌ ಅವರು ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್​ಪಥ್‌ನಲ್ಲಿ ಪರೇಡ್ ಆರಂಭವಾಗಿದೆ. ಈ ಮೂಲಕ ಭಾರತೀಯ ಸೇನಾಶಕ್ತಿ ಅನಾವರಗೊಂಡಿದೆ. ಈ ವೇಳೆ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಪಡೆಗಳ ಮುಖ್ಯಸ್ಥರು ಸೇರಿದಂತೆ ಸಿಡಿಎಸ್ ರಾವತ್ ಪಾಲ್ಗೊಂಡಿದ್ದಾರೆ. ಪರಮವೀರ ಚಕ್ರ ಮತ್ತು ಅಶೋಕ ಚಕ್ರ ಪುರಸ್ಕೃತರಿಂದ ಪರೇಡ್ ನಡೆಯುತ್ತಿದೆ. ಇದೇ ಮೊದಲ ಬಾರಿಗೆ ಬಾಂಗ್ಲಾದೇಶದ ಸೇನೆಯು ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗವಹಿಸಿದೆ. ವಿವಿಧ ರಾಜ್ಯಗಳ ಸ್ತಬ್ದಚಿತ್ರಗಳು ಸಹ ಪ್ರದರ್ಶನಗೊಳ್ಳುತ್ತಿದ್ದು ನೋಡುಗರ ಕಣ್ಮನ ಸೆಳೆಯುತ್ತಿವೆ. 72nd : , . 26, 2021 (..): 72nd . . , . - , , , , . . .: / / : 72nd -- -’- .