ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ. ನವದೆಹಲಿ, ಮೇ, 4,2024 (..):ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ. ಈ ಕುರಿತು ಪತ್ರ ಬರೆದಿರುವ ರಾಹುಲ್ ಗಾಂಧಿ, ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಎಂದು ತಿಳಿಸಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಸಚಿವ ಅಮಿತ್​​ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು, ಅವರಿಗೆ ಟಿಕೆಟ್​​​ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿದ್ದಾರೆ. ಪ್ರಜ್ವಲ್​​​ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು ಎಂದು ಪತ್ರದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. : , , ,