ಟ್ರ್ಯಾಕ್ಟರ್ ರ್ಯಾಲಿ ಬೆಂಬಲಿಸಿ ವಿನೂತನ ಚಳುವಳಿ : ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬೆಂಗಳೂರು,ಜನವರಿ,24,2021(..) :ರೈತರ ಟ್ರ್ಯಾಕ್ಟರ್‌ ರ್ಯಾಲಿಗೆ ಬೆಂಬಲ ಸೂಚಿಸಿ ಕನ್ನಡ ಒಕ್ಕೂಟವು ಮೈಸೂರು ಸರ್ಕಲ್‌ ನಿಂದ ಮೆಜೆಸ್ಟಿಕ್‌ವರೆಗೂ ವಿನೂತನ ಚಳುವಳಿ ನಡೆಸಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದರು.ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನವರಿ 26 ರಂದು ರೈತರಿಂದ ಬೃಹತ್‌ ಪ್ರತಿಭಟನೆ ನಡೆಯಲಿದ್ದು,ಈ ಪ್ರತಿಭಟನೆಗೆ ರಾಜ್ಯ ಕಾಂಗ್ರೆಸ್‌ ಮತ್ತು ಕನ್ನಡ ಒಕ್ಕೂಟ ಸಂಪೂರ್ಣ ಬೆಂಬಲ ಸೂಚಿಸಿವೆ ಎಂದು ತಿಳಿಸಿದ್ದಾರೆ. : -------