2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ : ಸಚಿವೆ ಶಶಿಕಲಾ ಜೊಲ್ಲೆ ಬೆಂಗಳೂರು,ಜನವರಿ,24,2021(..): ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. 2 ಸಾವಿರ ಹೊಸ ಅಂಗನವಾಡಿ ಕೇಂದ್ರಕ್ಕೆ ಪ್ರಸ್ತಾವನೆ ಬಂದಿದೆ. ಈ ಪ್ರಸ್ತಾವನೆ ಕೇಂದ್ರಕ್ಕೆ ಕಳಿಸಿದ್ದೇವೆ. ಒಪ್ಪಿಗೆ ನೀಡುತ್ತೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು‌ ನೀಡುತ್ತಿದ್ದು, ಅಂಗನವಾಡಿ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಆರಂಭಗೊಂಡಿದೆ ಎಂದು ತಿಳಿಸಿದ್ದಾರೆ. : 2000 -----