ವಂಶಾಡಳಿತ ರಾಜಕಾರಣಕ್ಕೆ ಜನರು ಸೊಪ್ಪು ಹಾಕುವುದಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಂಗಳೂರು,ಜನವರಿ,15,2021(..) :ವಂಶಾಡಳಿತ ರಾಜಕಾರಣಕ್ಕೆ ಜನರು ಸೊಪ್ಪು ಹಾಕುವುದಿಲ್ಲ. ಕಾಂಗ್ರೆಸ್ ವಿಭಜನೆಗಳ ರಾಜಕಾರಣ ಮಾಡಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ. ಕಾಂಗ್ರೆಸ್ ಹಗರಣಗಳ ಸರ್ಕಾರ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.ಕಾಂಗ್ರೆಸ್ ನೀತಿ, ವಿಚಾರಗಳು ಭಾರತದ ವಿರುದ್ಧ ಇರುತ್ತವೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ರಾಜ್ಯ ಸರ್ಕಾರ ಲವ್ ಜಿಹಾದ್ ಗೂ ಕಾನೂನು ತರುತ್ತದೆ. ಹೆಣ್ಣುಮಕ್ಕಳ ರಕ್ಷಣೆಗೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ಹೇಳಿದ್ದಾರೆ. : ---’----