: ನಾಳೆ ನಡೆಯಬೇಕಿದ್ದ ಪರೀಕ್ಷೆ ದಿಢೀರನೆ ಮುಂದೂಡಿದ ಆಯೋಗ..! ಬೆಂಗಳೂರು, ಜ.23, 2021: (.. ): ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ (ಜ.24) ನಡೆಯಬೇಕಿದ್ದ ಪರೀಕ್ಷೆಯನ್ನು ದಿಢೀರನೆ ಮುಂದೂಡಲಾಗಿದೆ. ಜ. 23 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಹಾಗೂ ಜ. 24 ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು. ಏತನ್ಮಧ್ಯೆ ಜ. 23 ರಂದು ಬಲ್ಲ ಮೂಲಗಳಿಂದ ಸ್ವೀಕೃತಗೊಂಡ ಮಾಹಿತಿಯ ಪ್ರಕಾರ ಜ. 23 ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ, ದಿನಾಂಕ:24-01-2021ರಂದು ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕವನ್ನು ಮರುನಿಗದಿಪಡಿಸಿ ಪ್ರಕಟಿಸಲಾಗುವುದೆಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. 0000 : ----