“ದೇಶದ ಗಮನ ಸೆಳೆಯುವ ರೀತಿಯಲ್ಲಿ ಅನುಭವ ಮಂಟಪ ನಿರ್ಮಾಣ” : ಸಿಎಂ ಬಿ.ಎಸ್.ಯಡಿಯೂರಪ್ಪ ಮೈಸೂರು,ಜನವರಿ,23,2021(..): ದೇಶದ ಗಮನ ಸೆಳೆಯುವ ರೀತಿಯಲ್ಲಿ ಬಸವ ಕಲ್ಯಾಣದಲ್ಲಿ ಅನುಭವ ಮಂಟಪ ನಿರ್ಮಾಣ ಮಾಡಲಾಗುವುದು. ಸರ್ಕಾರ ಈಗಾಗಲೇ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚಿಸಿ 500 ಕೋಟಿ ಮೀಸಲಿಡಲಾಗಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ವಿಜಯನಗರ 1ನೇ ಹಂತದಲ್ಲಿ ನಿರ್ಮಾಣವಾಗಿರುವ ಬಸವ ಭವನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಬಸವಣ್ಣನವರು ಹನ್ನೆರಡನೇ ಶತಮಾನದಲ್ಲಿ ಸಮ‌ಸಮಾಜ ನಿರ್ಮಾಣದ ಕನಸು ಕಂಡವರು. ಆಚಾರವೇ ಸ್ವರ್ಗ, ಅನಾಚಾರವೇ ನರಕ ಎಂದು ಹೇಳಿ ಸಮಾಜವನ್ನ ಸನ್ಮಾರ್ಗದಲ್ಲಿ ನಡೆಸಿದವರು ಎಂದು ಸ್ಮರಿಸಿದರು. ಶಿವಮೊಗ್ಗದಲ್ಲಿ ನಿರ್ಮಾಣವಾಗುತ್ತಿರುವ ಅಕ್ಕಮಹಾದೇವಿ ಜನ್ಮಸ್ಥಳ ಅಭಿವೃದ್ದಿ ಇನ್ನೆರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು. ಕರ್ನಾಟಕ ಅನೇಕ ಶರಣ ಶರಣೆಯರಿಗೆ ಜನ್ಮ‌ಕೊಟ್ಟ ಕರ್ಮಭೂಮಿಯಾಗಿದೆ ಎಂದರು. ಅಲ್ಲಮಪ್ರಭು, ಅಕ್ಕಮಹಾದೇವಿ, ಬಸವಣ್ಣ ಅವರ ಅನುಭವ ಮಂಟಪ ನೆನೆದು ಪ್ರಧಾನಿ ನರೇಂದ್ರ ಮೋದಿ ಕಾರ್ಯಮಾಡುವರು. ಸಮಾಜದ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಅಭಿವೃದ್ಧಿಗಾಗಿ ನಿಗಮ‌ ಸ್ಥಾಪನೆ ಎಂದು ತಿಳಿಸಿದರು. : ---- -- ..