ವಿನೋದ್ ಪ್ರಭಾಕರ್ ‘ಶ್ಯಾಡೋ’ರಿಲೀಸ್’ಗೆ ರೆಡಿ ಬೆಂಗಳೂರು, ಜನವರಿ 23, 2021 (..): ನಟ ವಿನೋದ್ ಪ್ರಭಾಕರ್ ನಟನೆಯ ‘ಶ್ಯಾಡೋ’ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ರವಿ ಗೌಡ ನಿರ್ದೇಶನ ಮಾಡಿರುವ ಶ್ಯಾಡೊ ಮಾಸ್ ಜತೆಗೆ ಕ್ಲಾಸ್ ಸಿನಿಮಾ ಎಂದು ಚಿತ್ರ ತಂಡ ಹೇಳಿದೆ. ಅಂದುಕೊಂಡಿದ್ದಕ್ಕಿಂತ ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ ಎಂದು ಹೇಳಿದ್ದಾರೆ ವಿನೋದ್ ಪ್ರಭಾಕರ್. ಈ ಸಿನಿಮಾಕ್ಕೆ ಒಳ್ಳೇಯ ಪ್ರತಿಕ್ರಿಯೆ ಸಿಗಲಿದೆ ಎಂಬ ಭರವಸೆ ಇದೆ. ನಮ್ಮ ಚಿತ್ರವನ್ನು ಧೀರಜ್ ಎಂಟರ್‌ಪ್ರೈಸಿಸ್ ನವರು ವಿತರಣೆಯ ಹಕ್ಕನ್ನು ಪಡೆದುಕೊಂಡಿದ್ದಾರೆ ಎಂದು ವಿನೋದ್ ಮಾಹಿತಿ ನೀಡಿದ್ದಾರೆ.